ಫ್ಲೆಕ್ಸ್ ಹಾಕುವ ವಿಚಾರವಾಗಿ ಸಚಿವ ವಿ.ಸೋಮಣ್ಣ ಹಾಗೂ ಮಾಜಿ ಶಾಸಕ ಪ್ರಿಯಕೃಷ್ಣ ಬೆಂಬಲಿಗರ ನಡುವೆ ಮಾರಾಮಾರಿ ನಡೆದ ಘಟನೆಗೆ ಸಂಬಂಧಿಸಿದಂತೆ ಗೋವಿಂದರಾಜ ನಗರ ಠಾಣೆಯಲ್ಲಿ ಒಟ್ಟು ಮೂರು ಪ್ರತ್ಯೇಕ ಎಫ್ಐಆರ್ ದಾಖಲಾಗಿದೆ.ಘಟನೆಯ ಕುರಿತು ಪೊಲೀಸರೇ ಸ್ವಯಂಪ್ರೇರಿತ ಪ್ರಕರಣ ದಾಖಲಿಸಿಕೊಂಡಿದ್ದು, ಇದಲ್ಲದೇ ಕಾಂಗ್ರೆಸ್ ಹಾಗೂ ಬಿಜೆಪಿ ಕಾರ್ಯಕರ್ತರು ನೀಡಿರುವ ದೂರು - ಪ್ರತಿದೂರು ಆಧರಿಸಿ ಪ್ರಕರಣ ದಾಖಲಿಸಿಕೊಳ್ಳಲಾಗಿದೆ. ಕರ್ತವ್ಯ ನಿರತ ಪೊಲೀಸ್ ಸಿಬ್ಬಂದಿಯ ಮೇಲೆ ಹಲ್ಲೆ ಮಾಡಿರುವ ಆರೋಪದ ಮೇಲೆ