ಲೋಕಾಯುಕ್ತ ರೇಡ್ನಲ್ಲಿ ಬಿಜೆಪಿ ಶಾಸಕ ವಿರುಪಾಕ್ಷಪ್ಪ ಪುತ್ರ ಪ್ರಶಾಂತ್ ಮಾಡಾಳ್ ಸಿಕ್ಕಿಬಿದ್ದ ಪ್ರಕರಣ ಬಗೆದಷ್ಟು ಬಯಲಾಗುತ್ತಿದೆ.. ಇದು ಚುನಾವಣಾ ಹೊತ್ತಲ್ಲಿ ಪ್ರತಿಪಕ್ಷಗಳಿಗೆ ಸಿಕ್ಕ ದೊಡ್ಡ ಅಸ್ತ್ರವಾಗಿದೆ. ಸಿಎಂ ಬಸವರಾಜ ಬೊಮ್ಮಾಯಿ ರಾಜೀನಾಮೆಗೆ ಕಾಂಗ್ರೆಸ್ ಆಗ್ರಹಿಸಿದೆ. ಕಾಂಗ್ರೆಸ್ ನಾಯಕರು ಬೆಂಗಳೂರಿನಲ್ಲಿ ಬಿಜೆಪಿ ವಿರುದ್ದ ಪ್ರತಿಭಟನೆ ನಡೆಸಿದ್ದಾರೆ.. ಪ್ರತಿಭಟನೆಯಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯ, ಕಾಂಗ್ರೆಸ್ ರಾಜ್ಯ ಉಸ್ತುವಾರಿ ರಣ್ದೀಪ್ ಸಿಂಗ್ ಸುರ್ಜೇವಾಲಾ, ಶಾಸಕ ರಾಮಲಿಂಗಾರೆಡ್ಡಿ, ಶಾಸಕ ಪ್ರಿಯಾಂಕ್ ಖರ್ಗೆ ಭಾಗಿಯಾಗಿದ್ದರು. ಸಿಎಂ ಬಸವರಾಜ