ಬೆಂಗಳೂರು : ಬಿಜೆಪಿ-ಜೆಡಿಎಸ್ ಮೈತ್ರಿ ವಿಚಾರ ಮತ್ತೆ ಮುನ್ನೆಲೆಗೆ ಬಂದಿದೆ. ಮುಂದಿನ ಲೋಕಸಭೆ ಚುನಾವಣೆಯಲ್ಲಿ ಈಗಿರುವ ಸ್ಥಾನಗಳನ್ನು ಉಳಿಸಿಕೊಳ್ಳುವ ಸಲುವಾಗಿ ಬಿಜೆಪಿ ರಣತಂತ್ರ ರೂಪಿಸುತ್ತಿದೆ. ಇದರ ಭಾಗವಾಗಿ ರಾಜ್ಯದಲ್ಲಿ ಜೆಡಿಎಸ್ ಜೊತೆ ಮೈತ್ರಿಗೆ ಮುಂದಾಗಿದೆ. ಇತ್ತೀಚಿಗೆ ಮಾಜಿ ಪ್ರಧಾನಿ ಹೆಚ್ಡಿ ದೇವೇಗೌಡರು ಮತ್ತು ಕೇಂದ್ರ ಸಚಿವ ಅಮಿತ್ ಶಾ ದೆಹಲಿಯಲ್ಲಿ ಸಭೆ ಸೇರಿ ಮೈತ್ರಿ ಸೂತ್ರ ಹೆಣೆದಿದ್ದಾರೆ. ಆದರೆ ಸೀಟು ಹಂಚಿಕೆ ಇನ್ನೂ ಅಂತಿಮಗೊಂಡಿಲ್ಲ. ಬಹುತೇಕ 24+4 ಸೀಟು