Widgets Magazine

ಏಸು ಮೂರ್ತಿ ಸ್ಥಾಪನೆ ವಿರೋಧಿಸಿ ಇಂದು ಕನಕಪುರ ಚಲೋ ಪ್ರತಿಭಟನೆ

ರಾಮನಗರ| pavithra| Last Modified ಸೋಮವಾರ, 13 ಜನವರಿ 2020 (10:10 IST)
: ಕನಕಪುರದ ಹಾರೋಬೆಲೆಯ ಕಪಾಲ ಬೆಟ್ಟದಲ್ಲಿ ಏಸು ಮೂರ್ತಿ ಸ್ಥಾಪನೆ ವಿರೋಧಿಸಿ ಇಂದು ಹಿಂದು ಜಾಗರಣ ವೇದಿಕೆ ಚಲೋ ಪ್ರತಿಭಟನೆಗೆ ಕರೆ ನೀಡಿದೆ.ಕನಕಪುರದ ಅಯ್ಯಪ್ಪ ಸ್ವಾಮಿ ದೇವಸ್ಥಾನದಿಂದ  ಚೆನ್ನಬಸಪ್ಪ ವೃತ್ತದವರೆಗೆ ಕಾಲ್ನಡಿಗೆ ಜಾಥಾ ನಡೆಯಲಿದ್ದು, ಬಳಿಕ ಬೃಹತ್ ಪ್ರತಿಭಟನಾ ಸಮಾವೇಶ ನಡೆಯಲಿದೆ. ಇಂದು ನಡೆಯುವ ಕನಕಪುರ ಚಲೋ ಪ್ರತಿಭಟನೆಯಲ್ಲಿ ಕಲ್ಲಡ್ಕ ಪ್ರಭಾಕರ್, ಮಾಜಿ ಸಚಿವ ಸಿ.ಪಿ.ಯೋಗೇಶ್ವರ್ ಹಾಗೂ ಅನೇಕ ಬಿಜೆಪಿ ನಾಯಕರು  ಭಾಗಿಯಾಗಲಿದ್ದಾರೆ ಎನ್ನಲಾಗಿದೆ.


 ಹಾಗೇ ಈ ಕಾರ್ಯಕ್ರಮದಲ್ಲಿ 10 ಸಾವಿರಕ್ಕೂ ಹೆಚ್ಚು ಕಾರ್ಯಕರ್ತರು ಭಾಗಿಯಾಗುವ ನಿರೀಕ್ಷೆಯಿದ್ದು, ಈ ಹಿನ್ನಲೆಯಲ್ಲಿ ಕಪಾಲ ಬೆಟ್ಟದ ಬಳಿ ಪೊಲೀಸ್ ಭದ್ರತೆ ಏರ್ಪಡಿಸಲಾಗಿದೆ.

ಇದರಲ್ಲಿ ಇನ್ನಷ್ಟು ಓದಿ :