ಒರಾಯನ್ ಮಾಲ್ ತೆರವುಗೊಳಿಸಿ ಈ ಜಾಗವನ್ನು ಬಡವರಿಗೆ ನೀಡುವಂತೆ ಆಗ್ರಹಿಸಿ ಕನ್ನಡಪರ ಸಂಘಟನೆಗಳು ಪ್ರತಿಭಟನೆ ನಡೆಸಿವೆ. ರಾಜಕಾಲುವೆ ಒತ್ತುವರಿ ಮಾಡಿಕೊಂಡು ನಿರ್ಮಿಸಲಾಗಿರುವ ಒರಾಯನ್ ಮಾಲ್ ತೆರವುಗೊಳಿಸುವಂತೆ ಆಗ್ರಹಿಸಿ ಕನ್ನಡ ನವ ನಿರ್ಮಾಣ ಸೇನೆ ಅಧ್ಯಕ್ಷ ಯತಿರಾಜ್ ನಾಯ್ಡು ಹಾಗೂ ಕನ್ನಡ ನವ ನಿರ್ಮಾಣ ವೇದಿಕೆ ಅಧ್ಯಕ್ಷ ನರಸಿಂಹಮೂರ್ತಿ ಸೇರಿದಂತೆ ಹಲವು ಕನ್ನಡಪರ ಸಂಘಟನೆಗಳು ಪ್ರತಿಭಟನೆ ಕೈಗೊಂಡಿವೆ. ರಾಜಕಾಲುವೆ ಒತ್ತುವರಿಯಲ್ಲಿ ಭಾಗಿಯಾಗಿರುವ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ