ಬೆಂಗಳೂರು: ಈ ಸಾಲಿನ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಪ್ರಕಟಿಸಲಾಗಿದ್ದು, ಬಹುಭಾಷಾ ಗಾಯಕ ಯೇಸುದಾಸ್, ನಟ ಮುಖ್ಯಮಂತ್ರಿ ಚಂದ್ರು ಸೇರಿದಂತೆ 62 ಮಂದಿ ರಾಜ್ಯೋತ್ಸವ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ. ಬರಹಗಾರ್ತಿ ಡಾ. ವೈದೇಹಿ, ಇತಿಹಾಸಕಾರ ರಾಮಚಂದ್ರ ಗುಹಾ, ಪತ್ರಕರ್ತ ಅಬ್ಬೂರು ರಾಜಶೇಖರ್, ವಿಜ್ಞಾನಿ ಡಾ. ಶ್ರೀನಿವಾಸ್ ಸೇರಿದಂತೆ ವಿವಿಧ ಕ್ಷೇತ್ರದ 62 ಗಣ್ಯರು ಪ್ರಶಸ್ತಿಗೆ ಭಾಜನರಾಗಲಿದ್ದಾರೆ.ಪ್ರಶಸ್ತಿ ಮೊತ್ತ 1 ಲಕ್ಷ ರೂ ನಗದು, 20 ಗ್ರಾಂ ಚಿನ್ನದ ಪದಕ, ಪ್ರಶಸ್ತಿ ಫಲಕಗಳನ್ನು