ನಾವು ಶಾಂತಿಯುತವಾಗಿ ಪ್ರತಿಭಟನೆ ನಡೆಸುತ್ತಿದ್ದರೂ ಪೊಲೀಸರು ಅತ್ಯಂತ ನಿರ್ದಯವಾಗಿ ನಡೆದುಕೊಂಡಿದ್ದಾರೆ ಎಂದು ಬಿಜೆಪಿ ಸಂಸದೆ ಶೋಭಾ ಕರಂದ್ಲಾಜೆ ಆರೋಪಿಸಿದ್ದಾರೆ. ಫ್ರೀಡಂಪಾರ್ಕ್ನಲ್ಲಿ ಮಂಗಳೂರು ಚಲೋ ಕಾರ್ಯಕ್ರಮಕ್ಕಾಗಿ ಪ್ರತಿಭಟನೆಯಲ್ಲಿ ಪಾಲ್ಗೊಂಡ ಅವರು, ಪೊಲೀಸರು ನಮ್ಮನ್ನು ಹಿಡಿದು ಎಳೆದಾಡಿದ್ದಾರೆ. ಕಾಲಿಗೆ ನೋವಿದೆ ಮುಟ್ಟಬೇಡ ಎಂದರೂ ಪೊಲೀಸರ ನೂಕಾಟ ತಳ್ಳಾಟದಲ್ಲಿ ಚರ್ಮ ಕಿತ್ತುಬಂದಿದೆ ಎಂದು ತಿಳಿಸಿದ್ದಾರೆ. ಎರಡು ತಿಂಗಳ ಹಿಂದೆ ಕಾಲಿಗೆ ಶಸ್ತ್ರಚಿಕಿತ್ಸೆಯಾಗಿತ್ತು. ಇದೀಗ ಮತ್ತೆ ಅದೇ ಕಾಲಿಗೆ ಗಾಯವಾಗಿದೆ. ಪೊಲೀಸ್ ಅಧಿಕಾರಿ ಕ್ಯಾತಾಯಿನಿ