ಬೆಳಗಾವಿ: ಕೆಪಿಸಿಸಿ ಮಹಿಳಾ ರಾಜ್ಯ ಘಟಕ ಅಧ್ಯಕ್ಷೆ ಲಕ್ಷ್ಮೀ ಹೆಬ್ಬಾಳ್ಕರ್ ನೀಡಿರುವ ಕನ್ನಡ ವಿರೋಧಿ ಹೇಳಿಕೆ ಖಂಡಿಸಿ ಕರವೇ ನಾರಾಯಣಗೌಡ ಬಣ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು. ನಗರದ ಸಂಗೋಳ್ಳಿ ರಾಯಣ್ಣ ಸರ್ಕಲ್ ನಲ್ಲಿ ಪ್ರತಿಭಟನೆ ನಡೆಸಿದ ಕಾರ್ಯಕರ್ತರು, ಲಕ್ಷ್ಮಿ ಹೆಬ್ಬಾಳ್ಕರ್ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ಗಡಿನಾಡು ಬೆಳಗಾವಿ ಹಾಗೂ ಮಹಾರಾಷ್ಟ್ರದ ಗಡಿ ವಿಷಯ ದಾವೆ ನ್ಯಾಯಾಲಯದಲ್ಲಿದೆ. ಆದರೆ ಇತ್ತೀಚೆಗೆ ಬಸರಿಕಟ್ಟೆ ಗಣೇಶೋತ್ಸವ ಸಮಾರಂಭದಲ್ಲಿ ಲಕ್ಷ್ಮೀ ಹೆಬ್ಬಾಳ್ಕರ್, ಸುಪ್ರೀಂ ಕೋರ್ಟ್