ಬೆಂಗಳೂರು: ಇಂದಿನಿಂದ ವಿಧಾನಮಂಡಲ ಜಂಟಿ ಅಧಿವೇಶನ ಆರಂಭವಾಗುತ್ತಿದ್ದು, ಸದನವನ್ನುದ್ದೇಶಿಸಿ ಮಾತನಾಡಲು ರಾಜ್ಯಪಾಲ ವಜುಬಾಯಿ ವಾಲಾ ಈಗಾಗಲೇ ಸದನಕ್ಕೆ ಆಗಮಿಸಿದ್ದಾರೆ. ಸಿಎಂ ಸಿದ್ದರಾಮಯ್ಯ ಹಾಗೂ ಸಚಿವ ಸಂಪುಟದ ಹಿರಿಯ ಸದಸ್ಯರೊಂದಿಗೆ ಆಗಮಿಸಿದ ರಾಜ್ಯಪಾಲರು ಈಗಾಗಲೇ ಭಾಷಣ ಆರಂಭಿಸಿದ್ದಾರೆ.ಇಂದಿನಿಂದ ಫೆ. 28 ರವರೆಗೆ ಅಧಿವೇಶನ ನಡೆಯಲಿದೆ. ಫೆಬ್ರವರಿ 16 ರಂದು ಸಿಎಂ ಸಿದ್ದರಾಮಯ್ಯ ರಾಜ್ಯ ಬಜೆಟ್ ಮಂಡಿಸಲಿದ್ದಾರೆ.ತಾಜಾ ಸುದ್ದಿಗಳನ್ನು ಓದಲು ವೆಬ್ದುನಿಯಾ ಮೊಬೈಲ್ ಆ್ಯಪ್ ಡೌನ್ ಲೋಡ್ ಮಾಡಿಕೊಳ್ಳಿ