ಬೆಂಗಳೂರು: ಮುಂದಿನ ತಿಂಗಳು 6 ರಿಂದ ಮೂರು ದಿನಗಳವರೆಗೆ ವಿಧಾನಸೌಧದಲ್ಲಿ ವಿಶೇಷ ಜಂಟಿ ಅಧಿವೇಶನ ನಡೆಯಲಿದೆ. ಮೊದಲ ದಿನ ಜಂಟಿ ಅಧಿವೇಶನದಲ್ಲಿ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಭಾಷಣ ಮಾಡಲಿದ್ದಾರೆ. ಸ್ಪೀಕರ್ ಗಳು ಸಭೆ ನಡೆಸಿ ಈ ತೀರ್ಮಾನಕ್ಕೆ ಬಂದಿದ್ದು, ಸಿಎಂ ಸಿದ್ದರಾಮಯ್ಯ ಮತ್ತು ಕಾನೂನು ಸಚಿವರಿಗೆ ಸೂಚನೆ ನೀಡಲಾಗಿದೆ ಮೂಲಗಳಿಂದ ತಿಳಿದುಬಂದಿದೆ. ರಾಷ್ಟ್ರಪತಿಯಾದ ಮೇಲೆ ಇದೇ ಮೊದಲ ಬಾರಿಗೆ ರಾಮನಾಥ್ ಕೋವಿಂದ್ ರಾಜ್ಯಕ್ಕೆ ಆಗಮಿಸಲಿದ್ದಾರೆ. ಅಲ್ಲದೆ, ಇದೇ ಮೊದಲ