Widgets Magazine

ಇಂದು ಕರ್ನಾಟಕ ಬಂದ್ ಹಿನ್ನಲೆ; ಅಂಗಡಿ ಮುಂಗಟ್ಟುಗಳನ್ನು ಮುಚ್ಚಿಸಿದ ಕನ್ನಡ ಪರ ಸಂಘಟನೆಗಳು

ಬೆಂಗಳೂರು| pavithra| Last Modified ಗುರುವಾರ, 13 ಫೆಬ್ರವರಿ 2020 (10:25 IST)
ಬೆಂಗಳೂರು : ಡಾ.ಸರೋಜಿನಿ ಮಹಿಷಿ ವರದಿ ಜಾರಿಗೆ ತರುವಂತೆ ಆಗ್ರಹಿಸಿ ಇಂದು ವಿವಿಧ ಕನ್ನಡ ಪರ ಸಂಘಟನೆಗಳು ಕರ್ನಾಟಕ ಬಂದ್ ಗೆ ಕರೆ ನೀಡಿದ್ದಾರೆ.


ಈ ಹಿನ್ನಲೆಯಲ್ಲಿ ಬೆಳಿಗ್ಗೆ 6ರಿಂದ ಸಂಜೆ 6ರವರೆಗೆ ಬಂದ್ ನಡೆಯಲಿದ್ದು, ಪ್ರತಿಭಟನಾಕಾರರು ರಸ್ತೆಗಿಳಿದು ಟೈರ್ ಗೆ ಬೆಂಕಿ ಹಚ್ಚಿ ಪ್ರತಿಭಟನೆ ನಡೆಸುತ್ತಿದ್ದಾರೆ.


ಇಂದು 400 ಕ್ಕೂ ಹೆಚ್ಚು ಕನ್ನಡ ಪರ ಸಂಘಟನೆಗಳು  ಬಂದ್ ಮಾಡುತ್ತಿದ್ದು, ಅಂಗಡಿ ಮುಂಗಟ್ಟುಗಳನ್ನು ಮುಚ್ಚಿ ಬಂದ್ ಗೆ ಸಹಕರಿಸುವಂತೆ ಅಂಗಡಿ ಮಾಲೀಕರರ ಬಳಿ ಪ್ರತಿಭಟನಾಕಾರರು ಮನವಿ ಮಾಡಿದ್ದಾರೆ.ಇದರಲ್ಲಿ ಇನ್ನಷ್ಟು ಓದಿ :