ಬೆಂಗಳೂರು: ಮಹದಾಯಿ ನದಿ ನೀರಿಗಾಗಿ ಫೆಬ್ರವರಿ 4 ರಂದು ವಿವಿಧ ಸಂಘಟನೆಗಳು ಬಂದ್ ಗೆ ಕರೆ ನೀಡಿರುವುದು ಇದೀಗ ಆಡಳಿತಾರೂಢ ಕಾಂಗ್ರೆಸ್ ನುಂಗಲಾರದ ಬಿಸಿ ತುಪ್ಪವಾಗಿ ಪರಿಣಮಿಸಿದೆ. ಫೆಬ್ರವರಿ 4 ರಂದು ಬಿಜೆಪಿಯ ಕರ್ನಾಟಕ ಪರಿವರ್ತನಾ ರ್ಯಾಲಿಯ ಸಮಾರೋಪ ಸಮಾರಂಭ ಆಯೋಜಿಸಲಾಗಿದ್ದು, ಇದರಲ್ಲಿ ಪ್ರಧಾನಿ ಮೋದಿ, ಅಮಿತ್ ಶಾ ಭಾಗಿಯಾಗಲಿದ್ದಾರೆ. ಇದೇ ದಿನ ಬಂದ್ ನಡೆಸಿರುವುದಕ್ಕೆ ಈಗ ಪ್ರತಿಪಕ್ಷ ಬಿಜೆಪಿ ಟೀಕಾಪ್ರಹಾರ ನಡೆಸಿದೆ.ಪ್ರಧಾನಿ ಕಾರ್ಯಕ್ರಮಕ್ಕೆ ಬೇಕೆಂದೇ ಅಡ್ಡಿಪಡಿಸಲು ಕಾಂಗ್ರೆಸ್