ಬೆಂಗಳೂರು: ಕಾವೇರಿ ಜಲ ನಿರ್ವಹಣಾ ಮಂಡಳಿ ರಚನೆ ಮಾಡುವಂತೆ ಒತ್ತಾಯಿಸಿ ಇಂದು ತಮಿಳುನಾಡು ಬಂದ್ ಗೆ ಡಿಎಂಕೆ ಕರೆ ಕೊಟ್ಟಿದ್ದರೆ, ಇತ್ತ ಕರ್ನಾಟಕದಲ್ಲಿ ಜಲ ನಿರ್ವಹಣಾ ಮಂಡಳಿ ರಚನೆ ಮಾಡಬಾರದು ಎಂದು ಒತ್ತಾಯಿಸಿ ಕನ್ನಡ ಪರ ಹೋರಾಟಗಾರ ವಾಟಾಳ್ ನಾಗರಾಜ್ ಏಪ್ರಿಲ್ 12 ರಂದು ಕರ್ನಾಟಕ ಬಂದ್ ಗೆ ಕರೆಕೊಟ್ಟಿದ್ದಾರೆ.ಕರ್ನಾಟಕ-ತಮಿಳುನಾಡು ಗಡಿ ಅತ್ತಿಬೆಲೆಯಲ್ಲಿ ಮಾತನಾಡಿದ ವಾಟಾಳ್ ನಾಗರಾಜ್, ಯಾವುದೇ ಕಾರಣಕ್ಕೂ ಜಲ ನಿರ್ವಹಣಾ ಮಂಡಳಿ ರಚನೆ ಮಾಡಲು ಅವಕಾಶ ಬಿಡುವುದಿಲ್ಲ.