ಬೆಂಗಳೂರು:ಸೂಪರ್ ಸ್ಟಾರ್ ರಜನೀಕಾಂತ್ ರಾಜಕೀಯ ಪಕ್ಷ ಘೋಷಣೆ ಮಾಡಿದ ಹಿನ್ನಲೆಯಲ್ಲಿ ರಾಜ್ಯ ಬಿಜೆಪಿ ನಾಯಕರಾದ ಶೋಭಾ ಕರಂದ್ಲಾಜೆ ಮತ್ತು ಜಗದೀಶ್ ಶೆಟ್ಟರ್ ಪ್ರತಿಕ್ರಿಯಿಸಿದ್ದಾರೆ. ಒಬ್ಬ ಕನ್ನಡಿಗನಾಗಿ ರಜನಿ ತಮಿಳುನಾಡಿನಲ್ಲಿ ರಾಜಕೀಯಕ್ಕೆ ಎಂಟ್ರಿ ಕೊಟ್ಟಿರುವುದಕ್ಕೆ ಅಭಿನಂದಿಸುತ್ತೇನೆ. ತಮಿಳುನಾಡಿನಲ್ಲಿ ರಜನಿ ರಾಜಕೀಯ ಪ್ರವೇಶ ಸುಂಟರಗಾಳಿ ಎಬ್ಬಿಸಲಿದೆ. ಶೀಘ್ರದಲ್ಲೇ ಅವರು ಬಿಜೆಪಿಗೆ ಬೆಂಬಲ ಕೊಡುವಂತಾಗಲಿ ಎಂದು ಹಾರೈಸಿದ್ದಾರೆ.ಇನ್ನೊಂದೆಡೆ ಜಗದೀಶ್ ಶೆಟ್ಟರ್ ಪ್ರತಿಕ್ರಿಯಿಸಿದ್ದು, ರಜನಿ ರಾಜಕೀಯ ಪ್ರವೇಶ ಕರ್ನಾಟಕ ರಾಜ್ಯದ ಮೇಲೆ ಯಾವುದೇ ಪರಿಣಾಮ