ಬೆಂಗಳೂರು: ಕರ್ನಾಟಕ ರಾಜ್ಯ ಸರ್ಕಾರದಲ್ಲಿ ಬಹುನಿರೀಕ್ಷಿತ ಸಚಿವ ಸಂಪುಟ ವಿಸ್ತರಣೆಯ ಬೆನ್ನಲ್ಲೇ ಆಡಳಿತಾರೂಢ ಕಾಂಗ್ರೆಸ್ ಪಕ್ಷದಲ್ಲಿ ತೀವ್ರ ಅಸಮಾಧಾನದ ಹೊಗೆಯಾಡತೊಡಗಿದೆ. ಸಂಪುಟದಲ್ಲಿ ಸ್ಥಾನ ಸಿಗದಿರುವುದಕ್ಕೆ ಬೇಸರಗೊಂಡಿರುವ ಹಲವು ಹಿರಿಯ ಶಾಸಕರು ಹೈಕಮಾಂಡ್ ವಿರುದ್ಧ ಬಹಿರಂಗವಾಗಿಯೇ ಅಸಮಾಧಾನ ವ್ಯಕ್ತಪಡಿಸಿದ್ದು, ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡುವ ಬೆದರಿಕೆ ಒಡ್ಡಿದ್ದಾರೆ. ಇಂಡಿ ಕ್ಷೇತ್ರದ ಶಾಸಕ ಯಶವಂತರಾಯಗೌಡ ಪಾಟೀಲ್ ಹಾಗೂ ಸಾಗರ ಕ್ಷೇತ್ರದ ಶಾಸಕ ಬೆಳೂರು ಗೋಪಾಲಕೃಷ್ಣ ಸೇರಿದಂತೆ ಹಲವು ಮುಖಂಡರು ಸಂಪುಟದಿಂದ ಕೈಬಿಟ್ಟಿರುವುದಕ್ಕೆ