ನೀರಾವರಿ ವಿಷಯದಲ್ಲಿ ಕರ್ನಾಟಕಕ್ಕೆ ದೊಡ್ಡ ವಂಚನೆ ಆಗಿದೆ. ಈ ಬಗ್ಗೆ ದೊಡ್ಡ ಹೋರಾಟ ನಡೆಯಬೇಕಾಗಿದೆ. ನನಗೆ ಆಗಲ್ಲ ಅಂದರೂ ಹೋರಾಟ ಮಾಡ್ತೀನಿ ಎಂದು ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಹೇಳಿದ್ದಾರೆ. ಮೈಸೂರಿನ ಎಚ್.ಡಿ. ಕೋಟೆ ತಾಲೂಕಿನ ಬೀಚೆನಹಳ್ಳಿಯಲ್ಲಿ ಕಬಿನಿ ಜಲಾಶಯದ ಬಳಿ ಜಲಧಾರೆ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದ ಅವರು, ಸುದ್ದಿಗಾರರೊಂದಿಗೆ ಮಾತನಾಡುವಾಗ ಈ ವಿಷಯ ಹಂಚಿಕೊಂಡರು. ಕಬಿನಿ ಜಲಾಶಯದ ಕಾಮಗಾರಿಗಳಲ್ಲೂ ಸಾಕಷ್ಟು ಸಮಸ್ಯೆಗಳು ಎದುರಾಗಿದ್ದವು. ಆಗ ನಾನು ಹೋರಾಟ ಮಾಡಿ ಕೆಲಸ ಮಾಡಿಸಿದ್ದೆ.