ಬೆಂಗಳೂರಿನಲ್ಲಿ ಮೊದಲ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸಂಧ್ಯಾ ಸುರಕ್ಷಾ ಯೋಜನೆಯ ಮೊತ್ತವನ್ನು 1000ದಿಂದ 1200ರೂ.ಗೆ ಏರಿಕೆ ಮಾಡಲಾಗಿದ್ದು, ಇದಕ್ಕಾಗಿ 862ಕೋಟಿ ರೂ. ಹೆಚ್ಚುವರಿಯಾಗಿ ಮೀಸಲಿಡಲಾಗುವುದು ಎಂದರು. ವಿಧವಾ ವೇತನವನ್ನು 600ರಿಂದ 800 ರೂ.ಗೆ ಏರಿಕೆ ಮಾಡಲಾಗುವುದು.ಇದರಿಂದ 414 ಕೋಟಿ ರೂ. ಹೆಚ್ಚು ಮೀಸಲಿಡಬೇಕಾಗುತ್ತದೆ. ವಿಶೇಷ ಚೇತನ ಮಕ್ಕಳ ಶಿಷ್ಯ ವೇತನನ್ನು 600ರಿಂದ 800 ರೂ.ಗೆ ಏರಿಸಲಾಗುವುದು. ಇದರಿಂದ 3.66 ಲಕ್ಷ ವಿದ್ಯಾರ್ಥಿಗಳಿಗೆ ನೆರವಾಗಲಿದೆ. ಅಲ್ಲದೇ ರೈತ ಮಕ್ಕಳಿಗೆ ವಿದ್ಯಾರ್ಥಿ ವೇತನ