ಸಭೆಯಲ್ಲಿ ಕೊರೋನಾ ನಿಯಂತ್ರಣಕ್ಕಾಗಿ ಟಫ್ ರೂಲ್ಸ್ ಜಾರಿಯ ತೀರ್ಮಾನವನ್ನು ಕೈಗೊಳ್ಳಲಿದ್ದಾರೆ ಎಂಬುದಾಗಿ ತಿಳಿದು ಬಂದಿದೆ. ಜೊತೆಗೆ ರಾಜ್ಯದಲ್ಲಿ ಮತ್ತೆ ಕೊರೋನಾ ನಿಯಂತ್ರಣಕ್ಕಾಗಿ ಲಾಕ್ ಡೌನ್ ಜಾರಿಯಾಗುತ್ತಾ ಎನ್ನುವ ಕುತೂಹಲವನ್ನು ಮೂಡಿಸಿದೆ. ಈ ಕುರಿತಂತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ನಾಳೆ ಸಂಜೆ 4 ಗಂಟೆಗೆ ಕೋವಿಡ್ ಸಭೆಯನ್ನು ಕರೆಯಲಾಗಿದೆ. ಈ ಸಭೆಯಲ್ಲಿ ಕೊರೋನಾ ನಿಯಂತ್ರಣ ಕ್ರಮಗಳ ಕುರಿತಂತೆ ತಜ್ಞರೊಂದಿಗೆ ಚರ್ಚಿಸಲಾಗುತ್ತದೆ. ಬೆಂಗಳೂರಿನಲ್ಲಿ ಏರಿಕೆಯಾಗುತ್ತಿರುವಂತ ಕೊರೋನಾ ಕಂಟ್ರೋಲ್ ಕುರಿತಂತೆಯೂ ಚರ್ಚಿಸಲಾಗುತ್ತದೆ ಎಂಬುದಾಗಿ ತಿಳಿಸಿದ್ದಾರೆ.ಹೀಗಾಗಿ