ನವದೆಹಲಿ: ಕರ್ನಾಟಕ ವಿಧಾನಸಭೆ ಚುನಾವಣೆ ದಿನಾಂಕ ಯಾವಾಗ ಎಂಬ ಕುತೂಹಲಕ್ಕೆ ಇಂದು ತೆರೆ ಬೀಳುವ ನಿರೀಕ್ಷೆಯಿದೆ. ಇಂದು ನವದೆಹಲಿಯಲ್ಲಿ ಚುನಾವಣಾ ಆಯೋಗ ಸುದ್ದಿಗೋಷ್ಠಿ ನಡೆಸಲಿದ್ದು ದಿನಾಂಕ ಘೋಷಿಸುವ ಸಾಧ್ಯತೆಯಿದೆ. ಈ ಮೊದಲೇ ಚುನಾವಣಾ ಆಯೋಗ ಮಾರ್ಚ್ ಅಂತ್ಯಕ್ಕೆ ಅಥವಾ ಏಪ್ರಿಲ್ ಮೊದಲ ವಾರದಲ್ಲಿ ಚುನಾವಣಾ ದಿನಾಂಕ ಘೋಷಿಸುವುದಾಗಿ ಹೇಳಿತ್ತು. ಅದರಂತೆ ಇಂದು ಬೆಳಿಗ್ಗೆ 11 ಗಂಟೆಗೆ ಚುನಾವಣಾ ಆಯೋಗ ಸುದ್ದಿಗೋಷ್ಠಿ ನಡೆಸಲಿದೆ.ಈ ವೇಳೆ ದಿನಾಂಕ ಘೋಷಿಸಬಹುದು ಎಂದು ನಿರೀಕ್ಷಿಸಲಾಗಿದೆ.