ಬೆಂಗಳೂರು: ಕರ್ನಾಟಕ ವಿಧಾನಸಭೆ ಚುನಾವಣೆ ಮುಗಿದ ಬೆನ್ನಲ್ಲೇ ಎಕ್ಸಿಟ್ ಪೋಲ್ ಫಲಿತಾಂಶ ಹೊರಬಿದ್ದಿದ್ದು, ಕರ್ನಾಟಕದಲ್ಲಿ ಈ ಬಾರಿ ಜೆಡಿಎಸ್ ಕಿಂಗ್ ಮೇಕರ್ ಆಗುವ ಲಕ್ಷಣ ತೋರುತ್ತಿದೆ.ಹೆಚ್ಚಿನ ಸಮೀಕ್ಷೆಗಳ ಪ್ರಕಾರ ಬಿಜೆಪಿ ಹೆಚ್ಚಿನ ಸೀಟು ಗೆಲ್ಲಬಹುದು ಎಂದಿದ್ದರೂ, ಅದಕ್ಕೂ ಬಹುಮತದ ಕೊರತೆ ಕಾಡುವ ಸಾಧ್ಯತೆಯಿದೆ ಎನ್ನಲಾಗಿದೆ. ಒಂದು ವೇಳೆ ಕಾಂಗ್ರೆಸ್ ಅತೀ ದೊಡ್ಡ ಪಕ್ಷವಾಗಿ ಹೊರ ಹೊಮ್ಮಿದರೂ, ಅದಕ್ಕೂ ಬಹುಮತ ಸಿಗುವ ಸಾಧ್ಯತೆ ಕಡಿಮೆ. ಹೀಗಾಗಿ ಜೆಡಿಎಸ್ ಕಿಂಗ್ ಮೇಕರ್ ಆಗುವ