ಬೆಂಗಳೂರು: ಕೊವಿಡ್ ಕೇಸ್ ಹೆಚ್ಚುತ್ತಿರುವ ಹಿನ್ನಲೆಯಲ್ಲಿ ರಾಜ್ಯ ಸರ್ಕಾರ ಹೊಸ ಮಾರ್ಗಸೂಚಿಗಳನ್ನು ಜಾರಿಗೆ ತಂದಿದೆ. ಇಂದು ಕೊವಿಡ್ ಸೋಂಕಿತು ಉದ್ಯೋಗಿಗಳಿಗೆ 7 ದಿನ ಮನೆಯಲ್ಲೇ ಇರಲು ಸೂಚನೆ ನೀಡಲಾಗಿದೆ.ಕೊವಿಡ್ ಸೋಂಕಿತ ಉದ್ಯೋಗಿಗಳಿಗೆ ಸರ್ಕಾರಿ ಅಥವಾ ಖಾಸಗಿ ಕಂಪನಿಗಳು 7 ದಿನ ಕಡ್ಡಾಯ ರಜೆ ನೀಡಬೇಕು. ಈ ಸಮಯದಲ್ಲಿ ಅವರು ಮನೆಯಲ್ಲಿ ಪ್ರತ್ಯೇಕವಾಗಿರಬೇಕು ಎಂದು ಸೂಚನೆ ನೀಡಲಾಗಿದೆ.ಕೊರೋನಾ ರೂಪಾಂತರಿ ಜೆ.ಎನ್.1 ಬೇಗನೇ ಹರಡುತ್ತಿರುವುದರಿಂದ ರಾಜ್ಯ ಸರ್ಕಾರ ಹೊಸ ಮಾರ್ಗಸೂಚಿ ಬಿಡುಗಡೆ ಮಾಡಿದೆ.