ತೆಲಂಗಾಣ ಮತ್ತು ಕರ್ನಾಟಕ ರಾಜ್ಯದ ಗಡಿ ಸಮಸ್ಯೆಯನ್ನು ಬಗೆ ಹರಿಸಲು ಉಭಯ ರಾಜ್ಯಗಳ ಜಿಲ್ಲಾಧಿಕಾರಿಗಳು ಮಹತ್ವದ ಒಪ್ಪಂದಕ್ಕೆ ಹಾಗೂ ನಿರ್ಣಯಕ್ಕೆ ಬಂದಿದ್ದಾರೆ.ಕಲಬುರಗಿ ಜಿಲ್ಲೆಯ ಚಿಂಚೋಳಿ ತಾಲೂಕಿನ ಪೋತಂಗಲ್ ಗ್ರಾಮದ ಹತ್ತಿರ ಉದ್ಭವಿಸಿರುವ ತೆಲಂಗಾಣ ಮತ್ತು ಕರ್ನಾಟಕ ರಾಜ್ಯದ ಗಡಿ ಸಮಸ್ಯೆಯನ್ನು ಬಗೆ ಹರಿಸಲು ರಾಜ್ಯಗಳನ್ನು ವಿಭಜಿಸುವ ಕಾಗಿಣಾ ನದಿಯ ಮಧ್ಯಭಾಗದಿಂದ ರಾಜ್ಯದ ಗಡಿ ಗುರುತಿಸುವಂತೆ ಜಿಲ್ಲಾಧಿಕಾರಿಗಳು ನಿರ್ಣಯಿಸಿದರು.ಕಲಬುರಗಿ ಜಿಲ್ಲಾಧಿಕಾರಿ ಆರ್. ವೆಂಕಟೇಶಕುಮಾರ ಹಾಗೂ ತೆಲಂಗಾಣ ರಾಜ್ಯದ ವಿಕಾರಾಬಾದ ಜಿಲ್ಲೆಯ ಜಿಲ್ಲಾಧಿಕಾರಿ