ಮೈಸೂರು ಗ್ಯಾಂಗ್ ರೇಪ್ ಪ್ರಕರಣದ ಸಂಬಂಧ ವಿವಾದಾತ್ಮಕ ಹೇಳಿಕೆ ನೀಡಿದ್ದ ಗೃಹ ಸಚಿವ ಅರಗ ಜ್ಞಾನೇಂದ್ರ ವಿಷಾದ ಕೋರಿದ್ದೂ ಅಲ್ಲದೇ ತಮ್ಮ ಹೇಳಿಕೆಯನ್ನು ಹಿಂ ಪಡೆಯುತ್ತೇನೆ ಎಂದು ಹೇಳುವ ಮೂಲಕ ವಿವಾದಕ್ಕೆ ತೆರೆ ಎಳೆದಿದ್ದಾರೆ. ಹೌದು ಬೆಂಗಳೂರು ಹೊರವಲಯದ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹಕ್ಕೆ ಭೇಟಿ ಬಳಿಕ ಗೃಹ ಸಚಿವ ಆರಗ ಜ್ಞಾನೇಂದ್ರ ಮಾಧ್ಯಮಗಳಿಗೆ ಪ್ರತಿಕ್ರಿಯಿಸುವ ವೇಳೆ ನನ್ನ ಹೇಳಿಕೆಯಿಂದ ಬೇಸರ ಆಗಿದ್ದರೆ ವಿಷಾದ ವ್ಯಕ್ತಪಡಿಸುತ್ತೇನೆ. ಜೊತೆಗೆ ಹೇಳಿಕೆಯನ್ನು ಹಿಂಪಡೆಯುವ