ವಿಧಾನಮಂಡಲದ ಅಧಿವೇಶನಕ್ಕೆ ಗೈರುಹಾಜರಾಗಿ ನಟಿಯೊಬ್ಬಳೊಂದಿಗೆ ಡಾನ್ಸ್ ಮಾಡುತ್ತಿರುವ ಶಾಸಕ ಅಂಬರೀಷ್ ವರ್ತನೆ ಕಾಂಗ್ರೆಸ್ ನಾಯಕರ ಕಣ್ಣು ಕೆಂಪಾಗಿಸಿದೆ. ಬೆಳಗಾವಿಯ ಸುವರ್ಣಸೌಧದಲ್ಲಿ ನಡೆಯುತ್ತಿರುವ ವಿಧಾನಸಭೆ ಅಧಿವೇಶದಲ್ಲಿ ಪಾಲ್ಗೊಂಡು ತಮ್ಮ ಕ್ಷೇತ್ರದ ಸಮಸ್ಯೆಗಳ ಬಗ್ಗೆ ಧ್ವನಿ ಎತ್ತದೇ ನಟಿಯೊಂದಿಗೆ ನೃತ್ಯದಲ್ಲಿ ತೊಡಗಿರುವುದು ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ನಟ-ಕಂ-ರಾಜಕಾರಣಿಯಾಗಿರುವ ಅಂಬರೀಶ್ ತಮ್ಮ ಸ್ಥಾನಕ್ಕೆ ಹಿಂತಿರುಗುವ ಮುನ್ನ ವೇದಿಕೆಯಲ್ಲಿ ಮಹಿಳೆಯೊಂದಿಗೆ ನೃತ್ಯ ಮಾಡಿರುವುದು ವಿಡಿಯೋದಲ್ಲಿ ವೈರಲ್ ಆಗಿದೆ. ಅಂಬರೀಷ್ ಅವರ ಇಂತಹ ವರ್ತನೆ ಮೊದಲನೆಯದಲ್ಲ