ಜಿಲ್ಲಾಡಳಿತ, ಪ್ರವಾಸೋದ್ಯಮ ಇಲಾಖೆ ಹಾಗೂ ಸಾರ್ವಜನಿಕ ಶಿಕ್ಷಣ ಇಲಾಖೆ ಇವುಗಳ ಸಂಯುಕ್ತಾಶ್ರಯದಲ್ಲಿ ಕರ್ನಾಟಕ ದರ್ಶನ ಪ್ರವಾಸಕ್ಕೆ ಚಾಲನೆ ನೀಡಲಾಗಿದೆ.ಕಲಬುರಗಿ ಕ್ಷೇತ್ರ ಶಿಕ್ಷಣಾಧಿಕಾರಿಗಳ ಉತ್ತರ ವಲಯದ ವ್ಯಾಪ್ತಿಯಲ್ಲಿನ 2018-19ನೇ ಸಾಲಿನ ಸರ್ಕಾರಿ ಶಾಲೆಯ ಮಕ್ಕಳಿಗೆ ಏರ್ಪಡಿಸಲಾಗಿದ್ದ ಕರ್ನಾಟಕ ದರ್ಶನ ಶೈಕ್ಷಣಿಕ ಪ್ರವಾಸಕ್ಕೆ ವಿಧಾನ ಪರಿಷತ್ ಶಾಸಕ ಶರಣಪ್ಪ ಮಟ್ಟೂರ ಹಾಗೂ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ. ರಾಜಾ ಪಿ. ಅವರು ಹಸಿರು ನಿಶಾನೆ ತೋರಿಸುವ ಮೂಲಕ ಚಾಲನೆ ನೀಡಿದರು.