ಬೆಂಗಳೂರು: ಕರ್ನಾಟಕದಲ್ಲಿ ಮಳೆಗಾಲ ಯಾಕೋ ಮುಗಿಯುವ ಲಕ್ಷಣವೇ ಇಲ್ಲ. ವಾರಕ್ಕೊಮ್ಮೆಯಾದರೂ ಯಾವುದಾದರೂ ಒಂದು ಜಿಲ್ಲೆಯಲ್ಲಾದರೂ ಮಳೆ ಬಂದೇ ಬರುತ್ತದೆ. ಇಂದೂ ಈ ಕೆಲವು ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ವರದಿ ಹೇಳಿದೆ.ಇಂದಿನಿಂದ ಎರಡು-ಮೂರು ದಿನಗಳವರೆಗೆ ರಾಜ್ಯದ ಕೆಲವು ಜಿಲ್ಲೆಗಳಿಗೆ ಮಳೆಯ ಸಾಧ್ಯತೆಯಿದೆ ಎಂದು ಹವಾಮಾನ ವರದಿಗಳು ಹೇಳುತ್ತಿವೆ. ಕಳೆದ ವಾರ ಕರಾವಳಿ ಜಿಲ್ಲೆಗಳಲ್ಲಿ ಗುಡುಗು ಸಹಿತ ಭಾರೀ ಮಳೆಯಾಗಿತ್ತು.ಇಂದು ಕೊಡಗು, ಹಾಸನ, ಮೈಸೂರು, ಮಂಡ್ಯ, ರಾಮನಗರ, ಕೋಲಾರ, ಚಾಮರಾಜನಗರ,