ಜಮೀನಿನ ಖಾತೆ ಬದಲಾವಣೆಗೆ ಲಂಚ ಪಡೆಯುತ್ತಿದ್ದ ಕೆಎಎಸ್ ಅಧಿಕಾರಿ, ಬೆಂಗಳೂರು ಉತ್ತರ ತಾಲ್ಲೂಕಿನ ವಿಶೇಷ ತಹಶೀಲ್ದಾರ್ ವರ್ಷಾ ಒಡೆಯರ್ ಹಾಗೂ ಮಧ್ಯವರ್ತಿ ರಮೇಶ್ ಎಂಬುವವರನ್ನು ಲೋಕಾಯುಕ್ತ ಪೊಲೀಸರು ಮಂಗಳವಾರ ಸಂಜೆ ಬಂಧಿಸಿದ್ದಾರೆ. ಬೆಂಗಳೂರು ಉತ್ತರ ತಾಲ್ಲೂಕಿನ ದಾಸನಪುರ ಹೋಬಳಿ ವ್ಯಾಪ್ತಿಯ ಕೆಂಗನಹಳ್ಳಿ ಗ್ರಾಮದಲ್ಲಿ ಲಲಿತ್ಕುಮಾರ್ ಎಂಬುವವರಿಂದ 2 ಎಕರೆ ಜಮೀನು ಖರೀದಿಸಿದ್ದರು. ಆದರೆ, ಲಲಿತ್ ಅವರ ಹೆಸರೇ ಪಹಣಿಯಲ್ಲಿ ನಮೂದಾಗಿರಲಿಲ್ಲ. ಅವರ ಪರವಾಗಿ ಕಾಂತರಾಜು ಉಪ ವಿಭಾಗಾಧಿಕಾರಿ ನ್ಯಾಯಾಲಯಕ್ಕೆ ಅರ್ಜಿ