ಬೆಂಗಳೂರು : ಇಂದು ನೂತನ ಸಚಿವರಿಗೆ ಖಾತೆ ಹಂಚಿಕೆ ಮಾಡುವ ಸಂಬಂಧ ರಾಜ್ಯ ಕಾಂಗ್ರೆಸ್ ಉಸ್ತುವಾರಿ ಕೆ.ಸಿ. ವೇಣುಗೋಪಾಲ್ ಸಭೆ ನಡೆಸಲಿದ್ದಾರೆ. ಕಾಂಗ್ರೆಸ್-ಜೆಡಿಎಸ್ ದೋಸ್ತಿ ಸರ್ಕಾರದ ಸಂಪುಟ ಪುನಾರಚನೆಯಾಗಿರುವ ಹಿನ್ನಲೆಯಲ್ಲಿ ರಾಜ್ಯ ಕಾಂಗ್ರೆಸ್ ಉಸ್ತುವಾರಿ ಕೆ.ಸಿ. ವೇಣುಗೋಪಾಲ್ ಇಂದು ಸಭೆ ಕರೆದು 8 ಜನ ನೂತನ ಸಚಿವರಿಗೆ ಖಾತೆ ಹಂಚಿಕೆ ಮಾಡಲಿದ್ದಾರೆ. ಯಾರಿಗೆ ಯಾವ ಖಾತೆ ಸಿಗಲಿದೆ ಎನ್ನುವುದು ಇಂದಿನ ಸಭೆಯಲ್ಲಿ ನಿರ್ಧಾರವಾಗಲಿದೆ. ಮಾಜಿ ಸಿಎಂ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ