ಬೆಂಗಳೂರು: ವೀರಪ್ಪ ಮೊಯಿಲಿ ಕಾಂಗ್ರೆಸ್ ಪಕ್ಷದ ವಿದ್ಯಮಾನಗಳ ಕುರಿತು ಮಾಡಿರುವ ಟ್ವೀಟ್ ರಾಜ್ಯ ರಾಜಕಾರಣದಲ್ಲಿ ಭಾರೀ ಕೋಲಾಹಲವುಂಟು ಮಾಡಿರುವ ಬೆನ್ನಲ್ಲೇ ಕಾಂಗ್ರೆಸ್ ಹೈಕಮಾಂಡ್ ಮಧ್ಯಪ್ರವೇಶಿಸಿದೆ. ಟ್ವೀಟ್ ಬಗ್ಗೆ ಭಾರೀ ಚರ್ಚೆಯಾಗುತ್ತಿದ್ದಂತೆ, ವೀರಪ್ಪ ಮೊಯಿಲಿಗೆ ದೂರವಾಣಿ ಕರೆ ಮಾಡಿರುವ ರಾಜ್ಯ ಕಾಂಗ್ರೆಸ್ ಉಸ್ತುವಾರಿ ಕೆ.ಸಿ. ವೇಣುಗೋಪಾಲ್ ವಿವರಣೆ ಕೇಳಿದ್ದಾರೆ. ಈ ಸಂದರ್ಭದಲ್ಲಿ ಅಸಮಾಧಾನಗೊಂಡಿದ್ದ ವೇಣುಗೋಪಾಲ್ ಅವರನ್ನು ಸಮಾಧಾನಿಸಿದ್ದಾರೆ.ನಾನು ಕಾಂಗ್ರೆಸ್ ನ ನಿಷ್ಠಾವಂತ ಕಾರ್ಯಕರ್ತ. ಹೀಗಿರುವಾಗ ಪಕ್ಷಕ್ಕೆ ದ್ರೋಹ ಬಗೆಯುವ ಕೆಲಸ