ಕೇಂದ್ರ ಸರ್ಕಾರವೇ ಸದಾ ರಾಜ್ಯಗಳ ವಿರುದ್ಧ ಸಂಘರ್ಷಕ್ಕೆ ಇಳಿದರೆ ದೇಶ ಅಭಿವೃದ್ಧಿಯಾಗುವುದು ಹೇಗೆ ಎಂದು ದೆಹಲಿ ಮುಖ್ಯಮಂತ್ರಿ ಮತ್ತು ಆಮ್ ಆದ್ಮಿ ಪಾರ್ಟಿ ನಾಯಕ ಅರವಿಂದ್ ಕೇಜ್ರಿವಾಲ್ ಪ್ರಶ್ನಿಸಿದರು. ಕೇಂದ್ರ ಸರ್ಕಾರವು ರಾಜ್ಯಗಳಿಗೆ ತೊಂದರೆ ಕೊಡುತ್ತಿದೆ ಎಂದು ನೇರ ಆರೋಪ ಮಾಡಿದ ಅವರು, ಹಣದುಬ್ಬರ, ನಿರುದ್ಯೋಗದ ಬಿಸಿಗೆ ಸಾಮಾನ್ಯ ಜನರು ತತ್ತರಿಸಿದ್ದಾರೆ. ಈ ಹೊತ್ತಿನಲ್ಲಿ ಕೇಂದ್ರ ಸರ್ಕಾರವು ರಾಜ್ಯ ಸರ್ಕಾರಗಳ ಜೊತೆಗೂಡಿ ಜನಹಿತಕ್ಕಾಗಿ ಶ್ರಮಿಸಬೇಕಿತ್ತು. ಆದರೆ ಇಲ್ಲಿ ಆಗುತ್ತಿರುವುದೇ ಬೇರೆ