ಮಂಡ್ಯ : ಮಂಡ್ಯ ಲೋಕಸಭಾ ಕ್ಷೇತ್ರದ ಚುನಾವಣೆ ಕ್ಷಣ ಕ್ಷಣಕ್ಕೆ ಕುತೂಹಲ ಮೂಡಿಸುತ್ತಿದ್ದು, ಇದೀಗ ಮಂಡ್ಯದ 7 ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರನ್ನ ಕೆಪಿಸಿಸಿ ವಜಾ ಮಾಡಿದೆ ಎಂಬುದಾಗಿ ತಿಳಿದುಬಂದಿದೆ. ಮಂಡ್ಯದ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರು ಮೈತ್ರಿ ಸರ್ಕಾರದ ಅಭ್ಯರ್ಥಿ ನಿಖಿಲ್ ಗೆ ಬೆಂಬಲ ಸೂಚಿಸದೆ ಪಕ್ಷೇತರ ಅಭ್ಯರ್ಥಿ ಸುಮಲತಾ ಅವರಿಗೆ ಬೆಂಬಲ ನೀಡಿದ್ದಾರೆ. ಈ ಹಿನ್ನಲೆಯಲ್ಲಿ ಅವರನ್ನು ವಜಾ ಮಾಡಲಾಗಿದೆ ಎಂಬುದಾಗಿ ತಿಳಿದುಬಂದಿದೆ. ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾಗಿರುವ ಮಂಡ್ಯ ಗ್ರಾಮಾಂತರದ