ಬೆಂಗಳೂರು: ಹಜ್ ಭವನಕ್ಕೆ ಟಿಪ್ಪು ಸುಲ್ತಾನ್ ಹೆಸರಿಡುವ ವಿಚಾರ ಮತ್ತೆ ರಾಜಕೀಯ ಕೆಸರೆರಚಾಟಕ್ಕೆ ಕಾರಣವಾಗುತ್ತಿದೆ. ಇದೀಗ ಬಿಜೆಪಿ ಶಾಸಕ ಕೆಜಿ ಬೋಪಯ್ಯ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ.ಹಜ್ ಭವನಕ್ಕೆ ಟಿಪ್ಪು ಹೆಸರಿಟ್ಟರೆ ಮತ್ತೆ ಕರ್ನಾಟಕ ಹೊತ್ತಿ ಉರಿಯುತ್ತದೆ. ಹಜ್ ಭವನಕ್ಕೆ ಒಬ್ಬ ಮತಾಂಧನ ಹೆಸರಿಡುವ ಅಗತ್ಯವೇನಿದೆ? ಎಂದು ಬೋಪಯ್ಯ ಪ್ರಶ್ನಿಸಿದ್ದಾರೆ.ಹಿಂದೆ ಟಿಪ್ಪು ಜಯಂತಿ ಆಚರಣೆ ವಿರೋಧಿಸಿ ಬಿಜೆಪಿ ತೀವ್ರ ಹೋರಾಟ ನಡೆಸಿತ್ತು. ಇದು ಹಿಂಸಾಚಾರಕ್ಕೆ ತಿರುಗಿ ಓರ್ವನ ಸಾವಿಗೂ