ಕೋಟಿ ಕುಬೇರ ಕೆಜಿಎಫ್ ಬಾಬು ಈ ಬಾರಿಯ ವಿಧಾನಸಭಾ ಚುನಾವಣೆಯಲ್ಲಿ ಸೋಲು ಅನುಭವಿಸಿದ್ದಾರೆ. ಇದರ ಬೆನ್ನಲ್ಲೇ ಮಸೀದಿಗಳಿಗೆ ನೀಡಿದ್ದ ಹಣದ ಚೆಕ್ಗಳನ್ನು ವಾಪಸ್ ಪಡೆಯಲು ಕೆಜಿಎಫ್ ಬಾಬು ಮುಂದಾಗಿದ್ದಾರೆ. ಈ ಬಾರಿಯ ಚುನಾವಣೆಯಲ್ಲಿ ಸ್ಪರ್ಧಿಸಿದವರ ಪೈಕಿ ಅತಿ ಶ್ರೀಮಂತ ಅಭ್ಯರ್ಥಿಯಾಗಿದ್ದ ಕೆಜಿಎಫ್ ಬಾಬು ಉರ್ದು ಪತ್ರಿಕೆಯೊಂದರಲ್ಲಿ ಜಾಹೀರಾತು ನೀಡುವ ಮೂಲಕ ಚೆಕ್ಗಳನ್ನು ವಾಪಸ್ ಕೇಳಿದ್ದಾರೆ. ಚಿಕ್ಕಪೇಟೆ ವಿಧಾನಸಭಾ ಕ್ಷೇತ್ರದಲ್ಲಿ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದ ಯುಸೂಫ್ ಷರೀಫ್ ಅಲಿಯಾಸ್ ಕೆಜಿಎಫ್ ಬಾಬು