BBMP ಕಚೇರಿಗಳಲ್ಲಿ ಪ್ಲಾಸ್ಟಿಕ್ ಬಳಕೆ ನಿಷೇಧ ಮಾಡಿ BBMP ಆಯುಕ್ತ ತುಷಾರ್ ಗಿರಿನಾಥ್ ಖಡಕ್ ಆದೇಶ ಹೊರಡಿಸಿದ್ದಾರೆ. ಪ್ಲಾಸ್ಟಿಕ್ ಬಳಕೆಯಿಂದ ಪರಿಸರ ಮೇಲಾಗುವ ದುಷ್ಪರಿಣಾಮಗಳನ್ನು ತಡೆಗಟ್ಟಲು ಕೇಂದ್ರ ಸರ್ಕಾರ ಪ್ಲಾಸ್ಟಿಕ್ ಬಳಕೆ ನಿಷೇಧ ಕಾಯ್ದೆಯನ್ನ ಜಾರಿಗೆ ತಂದಿದೆ. ಅದನ್ನ ಎಲ್ಲರೂ ಕಟ್ಟುನಿಟ್ಟಾಗಿ ಪಾಲಿಸಬೇಕು. ಆದರೆ ಕೇಂದ್ರದ ಆದೇಶದ ನಡುವೆಯೂ BBMP ಕಚೇರಿಗಳಲ್ಲಿ ನಿಷೇಧಿತ ಪ್ಲಾಸ್ಟಿಕ್ ವಸ್ತುಗಳ ಬಳಕೆ ಹೆಚ್ಚಾಗಿತ್ತು. ಹೀಗಾಗಿ ಕಡ್ಡಾಯವಾಗಿ ಆದೇಶ ಪಾಲನೆ ಮಾಡುವಂತೆ ಆದೇಶ ಹೊರಡಿಸಿದ್ದಾರೆ. ಪ್ಲಾಸ್ಟಿಕ್