ಸಬ್ ರಜಿಸ್ಟ್ರಾರ್, ತಹಸೀಲ್ದಾರ್, ಆರ್.ಟಿ.ಓ ಸೇರಿದಂತೆ ಇತರ ಇಲಾಖೆಗಳಲ್ಲಿ ಲಂಚದ ವ್ಯವಹಾರ ಎಲ್ಲೆ ಮೀರುತ್ತಿದೆ. ಲಂಚ ತೆಗೆದುಕೊಳ್ಳುವುದಕ್ಕೆ ಬ್ರೇಕ್ ಹಾಕದಿದ್ದರೆ ಪರಿಸ್ಥಿತಿ ನೆಟ್ಟಗಿರುವುದಿಲ್ಲ ಎಂದು ಸಚಿವ ಖಡಕ್ ಎಚ್ಚರಿಕೆ ನೀಡಿದ್ದಾರೆ.ಕಲಬುರಗಿ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಕರ್ನಾಟಕ ಅಭಿವೃದ್ಧಿ ಕಾರ್ಯಕ್ರಮಗಳ ತ್ರೈಮಾಸಿಕ ಪ್ರಗತಿ ಪರಿಶೀಲನಾ ಸಭೆ ಅಧ್ಯಕ್ಷತೆ ವಹಿಸಿ ಮಾತನಾಡಿದ ಖರ್ಗೆ, ಅಧಿಕಾರಿಗಳಿಗೆ ಖಡಕ್ ಎಚ್ಚರಿಕೆ ನೀಡಿದರು.ಅಧಿಕಾರಿಗಳು ಸರಕಾರಕ್ಕಾಗಿ ಕೆಲಸ ಮಾಡುತ್ತಿದ್ದಾರೋ ಅಥವಾ ತಮಗೆ ಬೇಕಾದ ಜನರಿಗಾಗಿ ಕೆಲಸ ಮಾಡುತ್ತಿದ್ದಾರೋ