ಬೆಂಗಳೂರು ನಗರ ಪೊಲೀಸರು ಇತ್ತೀಚೆಗೆ ನಗರದ ರೌಡಿಶೀಟರ್ ಗಳಿಗೆ ಖಡಕ್ ವಾರ್ನಿಂಗ್ ಮೂಲಕ ಎಚ್ಚರಿಕೆಯನ್ನ ನೀಡಿದ್ದರು. ಇದರಿಂದ ಎಚ್ಚೆತ್ತ ಬೆಂಗಳೂರು ಹೊರವಲಯ ನೆಲಮಂಗಲ ವ್ಯಾಪ್ತಿಯ ಪೊಲೀಸರು ಬೆಳ್ಳಂಬೆಳಗ್ಗೆ ರೌಡಿ ಶೀಟರ್ ಗಳಿಗೆ ಎಚ್ಚರಿಕೆ ನೀಡಿದ್ದಾರೆ.ಬೆಂಗಳೂರು ಗ್ರಾಮಾಂತರ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಶಿವಶಂಕರ್ ನೇತೃತ್ವದಲ್ಲಿ ರೌಡಿ ಪರೇಡ್ ಮಾಡಿಸಿ ಖಡಕ್ ಎಚ್ಚರಿಕೆ ನೀಡಿದ್ದಾರೆ. ಪಟ್ಟಣದ ಅಂಬೇಡ್ಕರ್ ಕ್ರೀಡಾಂಗಣದಲ್ಲಿ ನಡೆದ ರೌಡಿ ಪರೇಡ್ ನಲ್ಲಿ ಎಸ್ ಪಿ ಖಡಕ್ ವಾರ್ನಿಂಗ್ ಗೆ ಹೆದರಿದ