ಚಾಮರಾಜಪೇಟೆ ಮೈದಾನದಲ್ಲಿ ಧ್ವಜಾರೋಹಣ ನೆರವೇರಿಸಲು ಕಂದಾಯ ಇಲಾಖೆ ಸಿದ್ಧತೆ ಮಾಡಿಕೊಳ್ಳುತ್ತಿದೆ. ಮೈದಾನ ಬಳಿ ಪೊಲೀಸರು ನಿನ್ನೆಯಿಂದಲೇ ಬಿಗಿ ಭದ್ರತೆ ಕೈಗೊಂಡಿದ್ದಾರೆ. ಮೈದಾನದ ಬಳಕೆ ಬಗ್ಗೆ ಪರ-ವಿರೋಧ ಚರ್ಚೆಗಳು ನಡೆಯುತ್ತಿದ್ದು, ಪೊಲೀಸರು ಈಗಾಗಲೇ ಶಾಂತಿ ಸಭೆಗಳನ್ನು ನಡೆಸಿದ್ದಾರೆ.ಆದರೆ, ಕೆಲ ಕಿಡಿಗೇಡಿಗಳು ಕಾನೂನು ಸುವ್ಯವಸ್ಥೆಗೆ ಧಕ್ಕೆ ತರುವ ಸಾಧ್ಯತೆ ಇರುವುದಾಗಿ ಗುಪ್ತಚರ ಅಧಿಕಾರಿಗಳು ಎಚ್ಚರಿಸಿದ್ದಾರೆ. ಇದೇ ಕಾರಣಕ್ಕೆ ಮೈದಾನ ಹಾಗೂ ಸುತ್ತಮುತ್ತ 600ಕ್ಕೂ ಸಿಬ್ಬಂದಿಯನ್ನು ಭದ್ರತೆಗಾಗಿ ನಿಯೋಜಿಸಲಾಗಿದೆ. ಹೆಚ್ಚುವರಿ ಪೊಲೀಸ್ ಕಮಿಷನರ್ ಸಂದೀಪ್