ದಲಿತ ಪ್ರತಿಭಟನಾಕಾರರನ್ನು ನಾಯಿಗಳಿಗೆ ಹೋಲಿಸಿದ ಕೇಂದ್ರ ಸಚಿವ ಅನಂತ್ ಕುಮಾರ್ ಹೆಗಡೆ ವಿರುದ್ಧ ಹಿರಿಯ ಕಾಂಗ್ರೆಸ್ ಮುಖಂಡ ಮಲ್ಲಿಕಾರ್ಜುನ್ ಖರ್ಗೆ ವಾಗ್ದಾಳಿ ನಡೆಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಂಸ್ಕ್ರತಿ ಇಲ್ಲದವರ ವಿರುದ್ಧ ಮಾತನಾಡುವುದು ಸರಿಯಲ್ಲ. ಇಂತಹ ಸಚಿವರನ್ನು ಸಂಪುಟದಲ್ಲಿರಿಸಿಕೊಂಡ ಪ್ರಧಾನಿ ಮೋದಿ ಸಚಿವರ ಹೇಳಿಕೆಯ ಹೊಣೆ ಹೊರಬೇಕು ಎಂದು ವಾಗ್ದಾಳಿ ನಡೆಸಿದ್ದಾರೆ. ಪ್ರಜಾಪ್ರಭುತ್ವದಲ್ಲಿ ಪ್ರತಿಭಟನೆ ಮಾಡುವುದು ಪ್ರತಿಯೊಬ್ಬರ ಹಕ್ಕಾಗಿದೆ. ಪ್ರತಿಭಟನೆ ಮಾಡುವುದು ಬಿಟ್ಟು ಇನ್ನೇನು ಮಾಡಬೇಕು. ಪ್ರತಿಭಟನೆ ಮಾಡಿದವರ