ಶಿವಮೊಗ್ಗ: ಮುಂಬರುವ ವಿಧಾನಸಭೆ ಚುನಾವಣೆಗೆ ಚಾಮುಂಡೇಶ್ವರಿ ಕ್ಷೇತ್ರದಿಂದ ಕಣಕ್ಕಿಳಿದಿರುವ ಸಿಎಂ ಸಿದ್ದರಾಮಯ್ಯ ಅವರನ್ನು ಕಾಂಗ್ರೆಸ್ ನಾಯಕರೇ ಸೋಲಿಸಲಿದ್ದಾರೆ ಎಂದು ವಿಧಾನ ಪರಿಷತ್ ವಿಪಕ್ಷ ನಾಯಕ ಕೆಸ್ ಈಶ್ವರಪ್ಪ ಲೇವಡಿ ಮಾಡಿದ್ದಾರೆ.ಕಳೆದ ಚುನಾವಣೆಯಲ್ಲಿ ಕೊರಟಗೆರೆಯಲ್ಲಿ ಸ್ಪರ್ಧಿಸಿದ್ದ ಜಿ ಪರಮೇಶ್ವರ್ ಸೋಲಿಗೆ ಸಿಎಂ ಸಿದ್ದರಾಮಯ್ಯ ಕಾರಣರಾಗಿದ್ದರು. ಈ ಬಾರಿ ಚುನಾವಣೆಯಲ್ಲಿ ಪರಮೇಶ್ವರ್ ಆ ಸೋಲಿಗೆ ಸೇಡು ತೀರಿಸಿಕೊಳ್ಳಲಿದ್ದಾರೆ ಎಂದು ಅವರು ವ್ಯಂಗ್ಯವಾಡಿದ್ದಾರೆ.ಶಿವಮೊಗ್ಗದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಈಶ್ವರಪ್ಪ ಸಿಎಂ ಸೋಲಿಗೆ ಬೇರೆ ಯಾರೂ ಬೇಕಾಗಿಲ್ಲ.