ಕಿಚ್ಚ ಸುದೀಪ್ ಇಂದು ಬಿಜೆಪಿಗೆ ಸೇರ್ಪಡೆ ಆಗಲಿದ್ದಾರೆ ಎನ್ನುವ ವಿಚಾರ ರಾಜಕೀಯದ ಪಡಸಾಲೆಯಲ್ಲಿ ಗಿರಕಿ ಹೊಡೆಯುತ್ತಿದೆ. ಇಂದು ಮಧ್ಯಾಹ್ನ 1.30ಕ್ಕೆ ಸಿಎಂ ಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿ ಸುದೀಪ್ ಅಧಿಕೃತವಾಗಿ ಬಿಜೆಪಿಗೆ ಸೇರ್ಪಡೆಯಾಗಲಿದ್ದಾರೆ ಎಂದು ಹೇಳಲಾಗುತ್ತಿದೆ. ಅವರನ್ನು ಬರಮಾಡಿಕೊಳ್ಳಲು ಸರ್ವ ರೀತಿಯಲ್ಲೂ ಬಿಜೆಪಿ ಸಿದ್ಧತೆ ಮಾಡಿಕೊಂಡಿದೆ ಎನ್ನಲಾಗುತ್ತಿದೆ. ಈ ಕುರಿತು ಸುದೀಪ್ ಯಾವುದೇ ಹೇಳಿಕೆಯನ್ನು ನೀಡದೇ ಇದ್ದರೂ, ಸುದೀಪ್ ಅವರ ಆಪ್ತರು ಹೇಳುವ ಪ್ರಕಾರ ಕಿಚ್ಚ ಬಿಜೆಪಿಗೆ ಬರುವುದು ಕನ್ಫರ್ಮ್.