ಬೆಂಗಳೂರು: ಮೊನ್ನೆಯಷ್ಟೇ ಜೆಡಿಎಸ್ ರಾಜ್ಯಾಧ್ಯಕ್ಷ ಎಚ್ ಡಿ ಕುಮಾರಸ್ವಾಮಿ ಕುಟುಂಬದವರನ್ನು ಭೇಟಿ ಮಾಡಿದ್ದ ಸ್ಯಾಂಡಲ್ ವುಡ್ ನಟ ಕಿಚ್ಚ ಸುದೀಪ್ ಇಂದು ಸಿಎಂ ಸಿದ್ದರಾಮಯ್ಯನವರನ್ನು ಭೇಟಿಯಾಗಿರುವುದು ಕುತೂಹಲ ಕೆರಳಿಸಿದೆ.ಕುಮಾರಸ್ವಾಮಿ, ನಟ ಸುದೀಪ್ ಗೆ ಜೆಡಿಎಸ್ ಪರ ಪ್ರಚಾರ ನಡೆಸುವಂತೆ ಕೋರಿದ್ದರು ಎಂಬುದನ್ನು ಅವರೇ ಹೇಳಿದ್ದರು. ಆದರೆ ಈ ಬಗ್ಗೆ ಸುದೀಪ್ ಯಾವುದೇ ಸ್ಪಷ್ಟನೆ ಕೊಟ್ಟಿರಲಿಲ್ಲ. ಇದೀಗ ಇಂದು ಬೆಳಿಗ್ಗೆಯೇ ಸಿಎಂ ಸಿದ್ದರಾಮಯ್ಯರನ್ನು ಸುದೀಪ್ ಭೇಟಿ ಮಾಡಿರುವುದು ಕುತೂಹಲ ಕೆರಳಿಸಿದೆ.ಸಿಎಂ ಅಧಿಕೃತ