ಬೆಂಗಳೂರು : ಕೇವಲ 50 ರೂ.ಗಾಗಿ ಸ್ನೇಹಿತನನ್ನೇ ಕೊಲೆ ಮಾಡಿರುವ ಘಟನೆ ಬೆಂಗಳೂರು ನಗರದ ಬಸವೇಶ್ವರ ನಗರ ಪೊಲೀಸ್ ಠಾಣಾ ವ್ಯಾಪ್ತಿಯ ಕುರಬರಹಳ್ಳಿ ಸರ್ಕಲ್ ಬಳಿ ನಡೆದಿದೆ.ಯುವಕ ಶಿವಮಾಧು(24)ನನ್ನು ಆತನ ಸ್ನೇಹಿತ ಶಾಂತಕುಮಾರ್ ಚಾಕುವಿನಿಂದ ಇರಿದು ಕೊಲೆ ಮಾಡಿ ಎಸ್ಕೇಪ್ ಆಗಿದ್ದಾನೆ. ಕೊಲೆಯಾದ ಶಿವಮಾಧು ಹಾಗೂ ಆರೋಪಿ ಶಾಂತಕುಮಾರ್ ಇಬ್ಬರೂ ಸ್ನೇಹಿತರು.ಚಿಕ್ಕಂದಿನಿಂದ ಆಡಿ ಬೆಳೆದವರು. ಕುರಬರಹಳ್ಳಿ ಸರ್ಕಲ್ ಬಳಿ ಹುಟ್ಟಿ ಬೆಳೆದವರು ಕೆಲ ವರ್ಷಗಳ ಹಿಂದೆ ಲಗ್ಗೆರೆ ಬ್ರಿಡ್ಜ್ ಬಳಿ