ಜಮ್ಮು ಮತ್ತು ಕಾಶ್ಮೀರದ ಶೋಪಿಯಾನ್ನಲ್ಲಿ ಭಾರತೀಯ ಸೇನಾಪಡೆ ಎನ್ ಕೌಂಟರ್ ನಡೆಸಿದ್ದು, ಜೈಷ್-ಇ-ಮೊಹಮ್ಮದ್ ಉಗ್ರ ಸಂಘಟನೆಯ ಓರ್ವ ಭಯೋತ್ಪಾದಕನನ್ನು ಹತ್ಯೆ ಮಾಡಿದೆ ಎಂದು ಶುಕ್ರವಾರ ತಿಳಿದುಬಂದಿದೆ. ಶೋಪಿಯಾನ್ನ ಕಾಪ್ರೆನ್ ಎಂಬ ಪ್ರದೇಶದಲ್ಲಿ ಉಗ್ರರು ಅಡಗಿ ಕುಳಿತಿರುವ ಕುರಿತು ಖಚಿತ ಮಾಹಿತಿ ಲಭ್ಯವಾದ ಹಿನ್ನೆಲೆಯಲ್ಲಿ ಜಮ್ಮು ಮತ್ತು ಕಾಶ್ಮೀರ ಪೊಲೀಸರು ಹಾಗೂ ಭಾರತೀಯ ಸೇನಾಪಡೆ ಜಂಟಿಯಾಗಿ ಕಾರ್ಯಾಚರಣೆಗಿಳಿದಿತ್ತು. ಈ ವೇಳೆ ಅಡಗಿ ಕುಳಿತಿದ್ದ ಉಗ್ರರು ಏಕಾಏಕಿ ಗುಂಡಿನ ದಾಳಿ ನಡೆಸಿದ್ದಾರೆ. ಕೂಡಲೇ