ಗಣಪತಿ ವಿಸರ್ಜನೆ ಮೆರವಣಿಗೆ ವೇಳೆ ಪೋಲಿಸರು ಮತ್ತು ಹಿಂದೂ ಸಂಘಟನೆ ಕಾರ್ಯಕರ್ತರ ನಡುವೆ ವಾಗ್ವಾದ ನಡೆದಿರುವ ಘಟನೆ ಶಿವಮೊಗ್ಗ ಜಿಲ್ಲೆಯ ಶಿಕಾರಿಪುರ ತಾಲೂಕಿನ ಪುಣೆದಹಳ್ಳಿ ಗ್ರಾಮದಲ್ಲಿ ನಡೆದಿದೆ. ಗ್ರಾಮದಲ್ಲಿ ದೇವಸ್ಥಾನ ಮತ್ತು ಮಸೀದಿ ಎರಡು ಮುಖಾಮುಖಿ ಇದ್ದು, ಮಸೀದಿ ಇರುವ ಕಾರಣಕ್ಕೆ ಪಟಾಕಿ ಸಿಡಿಸದಂತೆ DySP ಶಿವಾನಂದ ಸೂಚಿಸಿದ್ದರು. ಈ ವೇಳೆ ಹಿಂದೂ ಜಾಗರಣಾ ವೇದಿಕೆ ಜಿಲ್ಲಾ ಸಂಚಾಲಕ ದೇವರಾಜ್ ಅರಳಿಹಳ್ಳಿ ನೇತೃತ್ವದಲ್ಲಿ ಗ್ರಾಮಸ್ಥರು ನಡುರಾತ್ರಿ ಧರಣಿ ಕುಳಿತಿದ್ದು, ಪ್ರತಿಭಟನೆಯಲ್ಲಿ