ಗೋಲ್ಡನ್ ಸ್ಟಾರ್ ಗಣೇಶ್ ಮತ್ತು ನಿರ್ದೇಶಕ ಯೋಗರಾಜ್ ಭಟ್ ಕಾಂಬಿನೇಶನ್ನಲ್ಲಿ ಮೂಡಿಬರುತ್ತಿರುವ ಬಹುನಿರೀಕ್ಷಿತ ಗಾಳಿಪಟ-2 ಚಿತ್ರ ಇದೇ ಆಗಸ್ಟ್ 12ರಂದು ರಾಜ್ಯ, ಹೊರರಾಜ್ಯ, ಹೊರದೇಶಗಳಲ್ಲೂ ಪ್ರದರ್ಶನ ಕಾಣಲಿದೆ..ಈ ಕುರಿತು ಯೋಗರಾಜ್ ಭಟ್ ತಮ್ಮ ಫೇಸ್ಬುಕ್ ಖಾತೆಯಲ್ಲಿ ಫೋಟೋ ಒಂದನ್ನು ಹಂಚಿಕೊಂಡಿದ್ದು, ‘ಒಂದಿಷ್ಟು ಮೊಹಬ್ಬತ್ ಜೊತೆಗೆ ಮತ್ತೊಂದಷ್ಟು ಸ್ನೇಹವನ್ನು ಹೊತ್ತು ಇದೇ ಆಗಸ್ಟ್ 12ರಂದು ನಿಮ್ಮ ಮುಂದೆ ಬರ್ತಿದ್ದೀವಿ..ಅದೇ ಹಳೆಯ ಅಕ್ಕರೆ ಮತ್ತು ಪ್ರೀತಿಯನ್ನು ಬಯಸುವ ಗಾಳಿಪಟ-2 ಚಿತ್ರತಂಡ ಎಂದು ಬರೆದುಕೊಂಡಿದ್ದಾರೆ.