ಬೆಳಗಾವಿ : ಉತ್ತರ ಕರ್ನಾಟಕ ಭಾಗದ ಜನರ ಬಹುದಿನಗಳ ಬೇಡಿಕೆಯಾದ ಕಿತ್ತೂರು ಕರ್ನಾಟಕ ಘೊಷಣೆ ಕುರಿತು ಸಂಪುಟದಲ್ಲಿ ರ್ಚಚಿಸಿ ನಿರ್ಧಾರ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಭರವಸೆ ನೀಡಿದರು. ಪ್ರವಾಸಿ ಮಂದಿರದಲ್ಲಿ ಬುಧವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹೈದರಾಬಾದ್-ಕರ್ನಾಟಕ ಭಾಗವನ್ನು ಕಲ್ಯಾಣ ಕರ್ನಾಟಕ ಎಂದು ಘೊಷಣೆ ಮಾಡಿರುವಂತೆ ಬೆಳಗಾವಿ ಭಾಗವನ್ನು ಕಿತ್ತೂರು ಕರ್ನಾಟಕ ಎಂದು ಘೊಷಿಸುವ ಕುರಿತು ಸಚಿವ ಸಂಪುಟದಲ್ಲಿ ರ್ಚಚಿಸಲಾಗುವುದು. ಆ ಬಳಿಕ ಅಂತಿಮ ನಿರ್ಧಾರ ಪ್ರಕಟಿಸಲಾಗುವುದು.