ಬೆಂಗಳೂರು: ಡಿವೈಎಸ್ ಪಿ ಗಣಪತಿ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಚಿವ ಕೆಜೆ ಜಾರ್ಜ್ ವಿರುದ್ಧ ಸಿಬಿಐ ಎಫ್ ಐಆರ್ ದಾಖಲಿಸಿದ ಬೆನ್ನಲ್ಲೇ ಅವರ ರಾಜೀನಾಮೆಗೆ ಬಿಜೆಪಿ ಗಡುವು ವಿಧಿಸಿದೆ. ಇದೇ ಪ್ರಕರಣಕ್ಕೆ ಸಂಬಂಧಿಸಿದಂತೆ ಹಿಂದೊಮ್ಮೆ ರಾಜೀನಾಮೆ ಸಲ್ಲಿಸಿದ್ದ ಸಚಿವ ಜಾರ್ಜ್ ಸಿಐಡಿ ತನಿಖಾ ತಂಡ ಕ್ಲೀನ್ ಚಿಟ್ ನೀಡಿದ ಹಿನ್ನಲೆಯಲ್ಲಿ ಮತ್ತೆ ಸಚಿವ ಸಂಪುಟಕ್ಕೆ ಮರಳಿದ್ದರು.ಇದೀಗ ಸಿಬಿಐ ಎಫ್ ಐಆರ್ ವಿಧಿಸಿರುವುದರಿಂದ ಮತ್ತೆ ಬಿಜೆಪಿ ಜಾರ್ಜ್ ವಿರುದ್ಧ ಹೋರಾಟಕ್ಕೆ