ಬೆಂಗಳೂರು: ಮೈಸೂರು ರಸ್ತೆಯಲ್ಲಿ ರಸ್ತೆ ಗುಂಡಿ ತಪ್ಪಿಸಲು ಹೋಗಿ ಅಪಘಾತಕ್ಕೀಡಾಗಿ ಸಾವಿಗೀಡಾದ ದಂಪತಿ ಪ್ರಕರಣಕ್ಕೆ ಸಂಬಂಧಿಸಿದಂತೆ ನಗರಾಭಿವೃದ್ಧಿ ಸಚಿವ ಕೆಜೆ ಜಾರ್ಜ್ ಪ್ರತಿಕ್ರಿಯೆ ನೀಡಿದ್ದಾರೆ.ನಿನ್ನೆ ತಡರಾತ್ರಿ ಜೆ.ಜೆ. ನಗರಕ್ಕೆ ಸ್ಕೂಟರ್ ನಲ್ಲಿ ಸಾಗುತ್ತಿದ್ದ ತಮಿಳುನಾಡು ಮೂಲದ ದಂಪತಿ ರಸ್ತೆ ಗುಂಡಿ ತಪ್ಪಿಸಲು ಹೋಗಿ ಬಸ್ ಒಂದಕ್ಕೆ ಡಿಕ್ಕಿ ಹೊಡೆದು ಸಾವಿಗೀಡಾಗಿದ್ದರು. ಈ ಘಟನೆಗೆ ನಗರದ ರಸ್ತೆ ಗುಂಡಿಗಳೇ ಕಾರಣ ಎಂದು ವ್ಯಾಪಕ ಆಕ್ರೋಶ ವ್ಯಕ್ತವಾಗಿತ್ತು.ಇದಕ್ಕೆ ಪ್ರತಿಕ್ರಿಯೆ ನೀಡಿದ ಸಚಿವ ಜಾರ್ಜ್