ಬೆಂಗಳೂರು: ಖಾತೆ ಹಂಚಿಕೆ ವಿಚಾರದಲ್ಲಿ ತೀವ್ರ ಅಸಮಾಧಾನಗೊಂಡಿರುವ ಸಚಿವ ಆನಂದ್ ಸಿಂಗ್ ರಾಜೀನಾಮೆಗೆ ನಿರ್ಧರಿಸಿದ್ದು, ಇಂದೇ ರಾಜೀನಾಮೆ ಸಲ್ಲಿಸುವ ಸಾಧ್ಯತೆ ಇದೆ ಎನ್ನಲಾಗಿದೆ. ತಮಗೆ ನೀಡಿರುವ ಪರಿಸರ ಹಾಗೂ ಪ್ರವಾಸೋದ್ಯಮ ಖಾತೆ ಬದಲಾಗಿ ಪ್ರಬಲ ಖಾತೆ ನೀಡುವಂತೆ ಪಟ್ಟು ಹಿಡಿದಿರುವ ಆನಂದ್ ಸಿಂಗ್ ಅವರಿಗೆ ಸಿಎಂ ಬಸವರಾಜ್ ಬೊಮ್ಮಾಯಿ ಹಲವು ಬಾರಿ ಮನವೊಲಿಕೆಗೆ ಯತ್ನಿಸಿದ್ದು, ಕೊಟ್ಟ ಖಾತೆ ನಿಭಾಯಿಸುವಂತೆ ಸಲಹೆ ನೀಡಿದ್ದರು. ಆದರೂ ಹಠ ಮುಂದುವರೆಸಿರುವ ಆನಂದ್ ಸಿಂಗ್ ದೆಹಲಿಗೆ