ಬೆಂಗಳೂರಿನ ಏಟ್ರಿಯಾ ಹೋಟೆಲ್`ನಲ್ಲಿ ಬಿಜೆಪಿ ಶಾಸಕ ಅರವಿಂದ ಲಿಂಬಾವಳಿ ಮೇಲೆ ಹಲ್ಲೆಗೆ ಯತ್ನ ನಡೆದಿದೆ ಎಂದು ಮಾಧ್ಯಮಗಳು ವರದಿ ಮಾಡಿವೆ. ಎನ್`ಡಿಎ ರಾಷ್ಟ್ರಪತಿ ಅಭ್ಯರ್ಥಿ ರಾಮನಾಥ್ ಕೋವಿಂದ್ ಬೆಂಗಳೂರಿಗೆ ಆಗಮಿಸಿದ್ದರು. ಕೋವಿಂದ್ ಕೋಲಿ ಸಮಾಜಕ್ಕೆಸೇರಿದವರಾಗಿರುವುದರಿಂದ ಕೋವಿಂದ್ ಅವರನ್ನ ಭೇಟಿ ಮಾಡಲು ಕೋಲಿ ಸಮಾಜದ ಮುಖಂಡರು ಆಗಮಿಸಿದ್ದರು. ಆದರೆ, ಕೋಲಿ ಸಮಾಜದ ಮುಖಂಡರ ಭೇಟಿಗೆ ಅವಕಾಶ ನೀಡಲಿಲ್ಲ ಎಂದು ಕೋಲಿ ಸಮಾಜದ ಮುಖಂಡರು ಅರವಿಂದ ಲಿಂಬಾವಳಿ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.ಅರವಿಂದ ಲಿಂಬಾವಳಿ